ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಸ್‌ಸಿ ಮೂಲಕ ಪಡಿತರ ಸೇವೆ

Last Updated 19 ಸೆಪ್ಟೆಂಬರ್ 2021, 19:14 IST
ಅಕ್ಷರ ಗಾತ್ರ

ನವದೆಹಲಿ: ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಗ್ರಾಹಕ ವ್ಯವಹಾರ ಸಚಿವಾಲಯವು ಎಲೆಕ್ಟ್ರಾನಿಕ್ಸ್‌ ಮತ್ತು ಐಟಿ ಸಚಿವಾಲಯದೊಂದಿಗೆ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‌ಸಿ) ತೆರೆಯುವ ವ್ಯವಸ್ಥೆ ಮಾಡಿದೆ.‌

ದೇಶದಾದ್ಯಂತ 3.70 ಲಕ್ಷ ಸಿಎಸ್‌ಸಿಗಳ ಮೂಲಕ ಪಡಿತರ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಗ್ರಾಹಕ ವ್ಯವಹಾರ ಸಚಿವಾಲಯ ಮತ್ತು ಸಿಎಸ್‌ಸಿ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರಿಂದಾಗಿ 23.64 ಕೋಟಿ ಪಡಿತರ ಚೀಟಿದಾರರಿಗೆ ಉಪಯೋಗವಾಗಲಿದ್ದು, ಚೀಟಿದಾರರು ತಮ್ಮ ಸಮೀಪದ ಸಿಎಸ್‌ಸಿ ಕೇಂದ್ರಕ್ಕೆ ತೆರಳಿ ತಮ್ಮ ಚೀಟಿಗಳ ಪರಿಷ್ಕರಣೆ, ಹೊಸದಾಗಿ ಅರ್ಜಿ ಸಲ್ಲಿಕೆ, ಆಧಾರ್ ಜೋಡಣೆ, ಪಡಿತರ ಆಹಾರ ಲಭ್ಯತೆ ಮಾಹಿತಿ ಸಹಿತ ಹಲವು ಸೇವೆಗಳನ್ನು ಪಡೆಯಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT