ನವದೆಹಲಿ: ಐಪಿಎಲ್ ಕಪ್ ಗೆದ್ದ ರಾಯಲ್ ಚಾಲೆಂಚರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಕುರಿತು ಪ್ರಧಾನಿ ನರೇಂದ್ರ ಮೋದಿ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ‘ಇದು ಹೃದಯವಿದ್ರಾವಕ ಘಟನೆ’ ಎಂದು ಬುಧವಾರ ಹೇಳಿದ್ದಾರೆ.

‘ಬೆಂಗಳೂರಿನಲ್ಲಿ ಸಂಭವಿಸಿದ ಈ ದುರಂತದಲ್ಲಿ, ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರವೇ ಗುಣರಾಗುವಂತೆ ಹಾರೈಸುವೆ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ದುಃಖ ವ್ಯಕ್ತಪಡಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿದೆ. ಇನ್ನೂ ಹಲವರು ಅಸ್ವಸ್ಥರಾಗಿದ್ದು, ಅವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ.
.RCB ಸಂಭ್ರಮಾಚರಣೆಯಲ್ಲಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ.ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ: ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.