ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ರಾಹುಲ್ ಗಾಂಧಿ ಬುಧವಾರ ಶೋಕ ವ್ಯಕ್ತಪಡಿಸಿದ್ದಾರೆ.

‘ಭವಿಷ್ಯದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ವೇಳೆ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಉಭಯ ನಾಯಕರು ಸಲಹೆ ನೀಡಿದ್ದಾರೆ.

‘ಈ ಘಟನೆಯಲ್ಲಿ ಸಂತ್ರಸ್ತರಾದವರೊಂದಿಗೆ ಕಾಂಗ್ರೆಸ್ ಪಕ್ಷ ನಿಲ್ಲುವುದು. ಕರ್ನಾಟಕ ಸರ್ಕಾರದಿಂದ ಪರಿಹಾರ ವೈದ್ಯಕೀಯ ನೆರವು ಒದಗಿಸುವುದಕ್ಕೂ ಪಕ್ಷ ಪ್ರಯತ್ನಿಸಲಿದೆ’ ಎಂದು ಖರ್ಗೆ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.