ತಿರುವನಂತಪುರ: ವಿವಾಹವಾಗುವುದು ಮತ್ತು ಮಕ್ಕಳನ್ನು ಪಡೆಯುವುದರಿಂದ ಮಹಿಳೆಯರ ಉದ್ಯೋಗಕ್ಕೆ ಅಪಾಯ ಎದುರಾಗುತ್ತಿದೆ ಎಂದು ಹಲವು ಮಹಿಳೆಯರು ಅಭಿಪ್ರಾಯಪಟ್ಟಿದ್ದಾರೆ.

ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆ, ಸವಾಲುಗಳ ಬಗ್ಗೆ ಅಭಿಪ್ರಾಯ ಸಂಗ್ರಹಕ್ಕಾಗಿ ಕೇರಳ ಮಹಿಳಾ ಆಯೋಗದ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಹಿಳೆಯರು ಈ ರೀತಿ ಅಳಲು ತೋಡಿಕೊಂಡಿದ್ದಾರೆ.

ಸಭೆಯಲ್ಲಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುವ 100ಕ್ಕೂ ಹೆಚ್ಚು ಮಹಿಳೆಯರು ಭಾಗಿಯಾಗಿದ್ದರು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು ಈ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದೆ.

ಕೇರಳದ ಐಟಿ ವಲಯದಲ್ಲಿ 2.5 ಲಕ್ಷ ಮಹಿಳಾ ಉದ್ಯೋಗಿಗಳಿದ್ದಾರೆ.

ಉದ್ಯೋಗಸ್ಥ ಮಹಿಳೆಯರ ಇತರ ಸಮಸ್ಯೆಗಳು

*ಹೆರಿಗೆ ರಜೆ ನೀಡಲು ಉದ್ಯೋಗದಾತ ಸಂಸ್ಥೆಗಳ ಹಿಂದೇಟು

*ವಿವಾಹಿತ ಮಹಿಳೆಯರಿಗೆ ಬಡ್ತಿ ನಿರಾಕರಣೆ

*ಹೆರಿಗೆ ರಜೆ ನೀಡಿದಲ್ಲಿ ಸಂಸ್ಥೆಗೆ ಆರ್ಥಿಕವಾಗಿ ಹೊರೆಯಾಗುತ್ತದೆ ಎಂಬ ಭಾವ.

* ವಿವಾಹಿತರಾದ ನಂತರ ಹೆಚ್ಚಿನ ಅವಧಿ ದುಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂಬ ಕಳವಳ

*ಗರ್ಭಿಣಿ ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಹೇರುವ ಮೂಲಕ ಅವರು ಕೆಲಸಕ್ಕೆ ರಾಜೀನಾಮೆ ನೀಡುವಂತೆ ಪರೋಕ್ಷವಾಗಿ ಒತ್ತಾಯ

*ಹೆರಿಗೆ ರಜೆ ನಂತರ ವಾಪಸಾಗುವ ಮಹಿಳೆಯರ ಕಡೆಗಣನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.