ಗುವಾಹಟಿ: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗೆ(ಸಿಎಪಿಎಫ್) 50,000 ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅಸ್ಸಾಂನ ಗುವಾಹಟಿಯಲ್ಲಿ ಮಾತನಾಡಿರುವ ಅವರು, 'ಕೇಂದ್ರದ ಗೃಹ ಇಲಾಖೆಯಡಿ ಕಾರ್ಯನಿರ್ವಹಿಸುವ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗೆ(ಸಿಎಪಿಎಫ್) 50,000 ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಿದ್ದೇವೆ. ಮುಂದಿನ ಐದು ವರ್ಷಗಳಲ್ಲಿ ಸಿಎಪಿಎಫ್‌ನಿಂದ ನಿರ್ಗಮಿಸಿದ ಪ್ರತಿಯೊಬ್ಬರ ಸ್ಥಾನಕ್ಕೆ ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬ ಸಿಎಪಿಎಫ್ ಯೋಧನಿಗೆ ಒಂದು ವರ್ಷದಲ್ಲಿ 100 ದಿನಗಳ ಕಾಲ ಮನೆಯಲ್ಲಿ ಉಳಿಯಲು ಅವಕಾಶವಿರುತ್ತದೆ' ಎಂದು ತಿಳಿಸಿದ್ದಾರೆ.

'2022ರ ವೇಳೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಂತೃಪ್ತಿ ಅನುಪಾತ ಶೇ 55ಕ್ಕೆ ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಎರಡು ವರ್ಷಗಳ ಹಿಂದೆ ಶೇ 36ರಷ್ಟು ಸಂತೃಪ್ತಿ ಅನುಪಾತವಿತ್ತು. 2024ರ ವೇಳೆಗೆ ಅದನ್ನು ಶೇ 65ಕ್ಕೆ ಹೆಚ್ಚಿಸುವ ಗುರಿ ಇದೆ' ಎಂದು ಅಮಿತ್ ಶಾ ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.