ನವದೆಹಲಿ: 9 ಮಂದಿಯ ಸಾವಿಗೆ ಕಾರಣವಾದ ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಸ್ಫೋಟ ಸಂಬಂಧ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆ (ಯುಎಪಿಎ) ಹಾಗೂ ಸ್ಫೋಟಕ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ದೆಹಲಿ ಸ್ಫೋಟ: ಚದುರಿಬಿದ್ದ ಮಾನವ ಅವಶೇಷ; ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು.
ಹಲವು ಪ್ರದೇಶಗಳಲ್ಲಿ ದೆಹಲಿ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಏರ್ಪೋರ್ಟ್, ರೈಲು ಹಾಗೂ ಬಸ್ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ, ಯುಎಪಿಎ ಹಾಗೂ ಸ್ಫೋಟಕ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಯುಎಪಿಎ ಕಾಯ್ದೆಯ ಸೆಕ್ಷನ್ 16 ಹಾಗೂ 18ರಡಿ ಎಫ್ಐಆರ್ ದಾಖಲಾಗಿದೆ. ಈ ಸೆಕ್ಷನ್ಗಳು ಭಯೋತ್ಪಾದಕ ದಾಳಿಗೆ ಸಂಚು ಹಾಗೂ ಅದಕ್ಕೆ ಶಿಕ್ಷೆಗೆ ಸಂಬಂಧಿಸಿದ್ದವುಗಳಾಗಿವೆ.
.ದೆಹಲಿ | ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ: ಕೆಂಪುಕೋಟೆ ಬಳಿ ರಕ್ತದೋಕುಳಿ; 9 ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.