ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ದೆಹಲಿ ಚಲೋ: ಕೆಂಪುಕೋಟೆ ಭದ್ರತೆಗಾಗಿ ಪ್ರವಾಸಿಗರ ಭೇಟಿಗೆ ನಿರ್ಬಂಧ

Published 13 ಫೆಬ್ರುವರಿ 2024, 9:07 IST
Last Updated 13 ಫೆಬ್ರುವರಿ 2024, 9:07 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಭದ್ರತೆಗಾಗಿ ಕೆಂಪುಕೋಟೆಗೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿವಾಗಿ ನಿರ್ಬಂಧಿಸಲಾಗಿದೆ ಎಂದು ಎಎಸ್‌ಐ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇದರ ಜತೆಗೆ ಹಳೆಯ ದೆಹಲಿಯಲ್ಲಿರುವ ಯುನೆಸ್ಕೊ ವಿಶ್ವ ಪರಂಪರೆಯ ತಾಣವಾದ ಮೊಘಲ್ ಸ್ಮಾರಕವನ್ನೂ ಸೋಮವಾರ ರಾತ್ರಿ ಬಂದ್‌ ಮಾಡಲಾಗಿದ್ದು, ಬಿಗಿ ಭದ್ರತೆ ನಿಯೋಜಿಸಲಾಗಿದೆ. ಮುಂದಿನ ಆದೇಶದವರೆಗೂ ಪ್ರವಾಸಿಗರು ಭೇಟಿ ನೀಡುವಂತಿಲ್ಲ ಎಂದು ತಿಳಿಸಲಾಗಿದೆ.

ರೈತ ಮುಖಂಡರು ಮತ್ತು ಕೇಂದ್ರದ ನಡುವಿನ ಮಾತುಕತೆಯ ನಂತರ ಮಂಗಳವಾರ ರೈತರ ‘ದೆಹಲಿ ಚಲೋ’ ಮೆರವಣಿಗೆಯನ್ನು ತಡೆಯಲು ಗಡಿ ಪ್ರದೇಶಗಳಲ್ಲಿ ಬಹು ಪದರದ ಬ್ಯಾರಿಕೇಡ್‌ಗಳು, ಕಾಂಕ್ರೀಟ್ ಬ್ಲಾಕ್‌ಗಳು, ಕಬ್ಬಿಣದ ಮೊಳೆಗಳು ಮತ್ತು ಕಂಟೇನರ್‌ಗಳ ಗೋಡೆಗಳನ್ನು ನಿರ್ಮಿಸಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT