ನವದೆಹಲಿ: ಆಂಧ್ರಪ್ರದೇಶದ ತಿರುಪತಿಯಿಂದ ಕಳ್ಳಸಾಗಣೆ ಮಾಡುತ್ತಿದ್ದ 10 ಟನ್ ತೂಕದ ರಕ್ತಚಂದನವನ್ನು ದೆಹಲಿ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಆಗ್ನೇಯ ಜಿಲ್ಲೆಯ ಎಸ್ಟಿಎಫ್ ತಂಡವು ಇಬ್ಬರು ಕಳ್ಳಸಾಗಣೆದಾರರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಪ್ಟೆಂಬರ್ 4ರಂದು ಹೊಸಕೋಟೆ ಪೊಲೀಸರು ₹25 ಲಕ್ಷ ಮೌಲ್ಯದ 11 ಕ್ವಿಂಟಲ್ ತೂಕದ 102 ತುಂಡು ರಕ್ತಚಂದನ ವಶಪಡಿಸಿಕೊಂಡಿದ್ದರು.

ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಿಂದ ರಕ್ತಚಂದನ ಮರದ ತುಂಡುಗಳನ್ನು ತರಿಸಿಕೊಂಡು, ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಟ್ರಾನ್ಸ್ಪೋರ್ಟ್ ಕಂಪನಿ ಸರಕು ಸಾಗನೆ ವಾಹನದಲ್ಲಿ ಸಾಗಿಸುವಾಗ ಪೊಲೀಸರು ವಶಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.