ನವದೆಹಲಿ: ದೇಶದಲ್ಲಿ ಸತತ 5 ದಿನಗಳಿಂದಲೂ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು 24 ಗಂಟೆಯಲ್ಲಿ 3,29,942 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಅವಧಿಯಲ್ಲಿ ಸೋಂಕಿನಿಂದ 3,876 ಮಂದಿ ಮೃತಪಟ್ಟಿದ್ದು, 3,56,082 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
India reports 3,29,942 new #COVID19 cases, 3,56,082 discharges and 3,876 deaths in the last 24 hours, as per Union Health Ministry
Total cases: 2,29,92,517 Total discharges: 1,90,27,304 Death toll: 2,49,992 Active cases: 37,15,221
ಅಂಕಿ ಅಂಶಗಳ ಪ್ರಕಾರ ಸೋಂಕಿತರಿಗಿಂತ ಆಸ್ಪತ್ರೆಗಳಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಸಮಾಧಾನದ ಸಂಗತಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಪ್ರಕಟಣೆ ಪ್ರಕಾರ, ದೇಶದಲ್ಲಿ ಒಟ್ಟು 2,29,92,517 ಕೋವಿಡ್ ಸೋಂಕು ಪ್ರಕರಣಗಳು ದೃಢಗೊಂಡಿವೆ. ಹಾಗೆಯೇ ಒಟ್ಟು ಮೃತಪಟ್ಟವರ ಸಂಖ್ಯೆ 2,49,992ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 37,15,221 ಪ್ರಕರಣಗಳು ಸಕ್ರಿಯವಾಗಿವೆ. ಇದು ಒಟ್ಟು ಪ್ರಕರಣಗಳ ಶೇಕಡಾ 15.53ರಷ್ಟಿದ್ದು, ಚೇತರಿಕೆ ಪ್ರಮಾಣವು ಶೇಕಡಾ 83.39ರಷ್ಟು ದಾಖಲಾಗಿದೆ.
ಇಂದಿನವರೆಗೂ ದೇಶದಲ್ಲಿ 17.27 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.