ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ: ಸುಳ್ಳು, ತಿರುಚಿದ ಸುದ್ದಿ ಪ್ರಕಟಿಸದಂತೆ ಕೇಂದ್ರ ಸರ್ಕಾರ ಸಲಹೆ

ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ
Published 20 ಜನವರಿ 2024, 15:50 IST
Last Updated 20 ಜನವರಿ 2024, 15:50 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಅಥವಾ ತಿರುಚಿದ ಸುದ್ದಿಗಳನ್ನು ಪ್ರಕಟಿಸದಂತೆ ಎಚ್ಚರವಹಿಸಲು ಕೇಂದ್ರ ಸರ್ಕಾರವು ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಶನಿವಾರ ಸಲಹೆ ನೀಡಿದೆ.

ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವೊಂದು ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಹರಡುವುದು ಗಮನಕ್ಕೆ ಬಂದಿದೆ. ಇದರಿಂದ ಕೋಮು ಸೌಹಾರ್ದತೆ, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗಬಹುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿದ ಸಲಹೆಯಲ್ಲಿ ಹೇಳಿದೆ.

ದಿನಪತ್ರಿಕೆಗಳು, ಖಾಸಗಿ ಟಿ.ವಿ ಚಾನೆಲ್‌ಗಳು, ಡಿಜಿಟಲ್‌ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಪ್ರಕಟಿಸುವವರು ಹಾಗೂ ಸಾಮಾಜಿಕ ಮಾಧ್ಯಮಗಳ ವೇದಿಕೆಗಳು ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT