ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ ಸಂಬಂಧ ಹೊಂದಲು ನಿರಾಕರಣೆ: ಸಹಜೀವನ ಸಂಗಾತಿಯನ್ನೇ ಕೊಂದ ಗೆಳೆಯ

Published 14 ಡಿಸೆಂಬರ್ 2023, 5:11 IST
Last Updated 14 ಡಿಸೆಂಬರ್ 2023, 5:11 IST
ಅಕ್ಷರ ಗಾತ್ರ

ಇಂದೋರ್‌: ತನ್ನೊಂದಿಗೆ ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ ಸಹಜೀವನ ಸಂಗಾತಿಯನ್ನು ಆಕೆಯ ಗೆಳೆಯನೇ ಕತ್ತು ಸೀಳಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಇಂದೋರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಗುಣಾ ಜಿಲ್ಲೆಯ ಪ್ರವೀಣ್ ಸಿಂಗ್ ಧಾಕಡ್ (24) ಎಂದು ಗುರುತಿಸಲಾಗಿದೆ.

ಕೆಲ ದಿನಗಳಿಂದ ಸಂತ್ರಸ್ತೆ( 20) ಹಾಗೂ ಪ್ರವೀಣ್ ಇಬ್ಬರು ಒಟ್ಟಿಗೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಇನ್‌ಸ್ಟಾಗ್ರಾಮ್‌ ಮೂಲಕ ಪರಿಚಯವಾಗಿದ್ದ ಇವರು ಪ್ರೇಮಿಗಳಾಗಿದ್ದರು.

ಸಂತ್ರಸ್ತೆಯು ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಪ್ರವೀಣ್‌, ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ. ತ್ರೀವ ರಕ್ತಸ್ರಾವದಿಂದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಆರೋಪಿ ಮೃತದೇಹವನ್ನು ಕೊಠಡಿಯಲ್ಲಿಟ್ಟು, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ. ಆಕೆಯ ಮೊಬೈಲ್‌ ಫೋನ್‌ ಅನ್ನೂ ತೆಗೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಡಿಸೆಂಬರ್‌ 7ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT