ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್ ಅರ್ಜಿ ತುರ್ತು ವಿಚಾರಣೆಗೆ ರಿಜಿಸ್ಟ್ರಿ ನಕಾರ

Published 30 ಮೇ 2024, 0:13 IST
Last Updated 30 ಮೇ 2024, 0:13 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಂತರ ಜಾಮೀನಿನ ಅವಧಿಯನ್ನು ವೈದ್ಯಕೀಯ ಕಾರಣಕ್ಕೆ ಏಳು ದಿನಗಳವರೆಗೆ ವಿಸ್ತರಿಸಬೇಕು ಎಂದು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿ ಮಾಡಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿ ಬುಧವಾರ ನಿರಾಕರಿಸಿದೆ.

ರೆಗ್ಯುಲರ್ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಲು ಕೇಜ್ರಿವಾಲ್ ಅವರಿಗೆ ಅನುಮತಿ ನೀಡಲಾಗಿರುವ ಕಾರಣಕ್ಕೆ ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಲು ಆಗುವುದಿಲ್ಲ ಎಂದು ರಿಜಿಸ್ಟ್ರಿ ಹೇಳಿದೆ. ಕೇಜ್ರಿವಾಲ್ ಸಲ್ಲಿಸಿರುವ ಮುಖ್ಯ ಅರ್ಜಿ ಕುರಿತ ತೀರ್ಪನ್ನು ವಿಭಾಗೀಯ ಪೀಠವೊಂದು ಕಾಯ್ದಿರಿಸಿರುವ ಕಾರಣ, ಮಧ್ಯಂತರ ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆಗೆ ಎತ್ತಿಕೊಳ್ಳಬೇಕೇ ಎಂಬ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ತೀರ್ಮಾನಿಸುತ್ತಾರೆ ಎಂದು ರಜಾಕಾಲದ ಪೀಠವು ಮಂಗಳವಾರ ಹೇಳಿತ್ತು.

ಪಿಇಟಿ–ಸಿಟಿ ಪರೀಕ್ಷೆ ಸೇರಿದಂತೆ ಕೆಲವು ವೈದ್ಯಕೀಯ ತಪಾಸಣೆಗಳಿಗೆ ಒಳಗಾಗಬೇಕಿರುವ ಕಾರಣ ತಮಗೆ ನೀಡಿರುವ ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳ ಮಟ್ಟಿಗೆ ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT