ಗುವಾಹತಿ: ಸ್ಥಳಾಂತರಗೊಂಡಿರುವ ಜನರ ಪುನರ್ವಸತಿಯತ್ತ ಗಮನಹರಿಸುವಂತೆ ಮಣಿಪುರ ನೂತನ ಮುಖ್ಯಮಂತ್ರಿ ಯಮ್ನಮ್ ಖೇಮ್ಚಂದ್ ಸಿಂಗ್ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಭಾನುವಾರ ಸಂಜೆ ಉಪಮುಖ್ಯಮಂತ್ರಿಗಳೊಂದಿಗೆ ಖೇಮ್ಚಂದ್ ಅವರು ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಿಲ್ಲದ ಸಂಘರ್ಷ, ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕೈಗೊಂಡಿರುವ ಕ್ರಮಗಳ ಕುರಿತು ಅಮಿತ್ ಶಾ ಚರ್ಚಿಸಿ, ಮಾಹಿತಿ ಪಡೆದುಕೊಂಡಿದ್ದಾರೆ.

‘ರಾಜ್ಯದಲ್ಲಿ ಶಾಂತಿ ಮತ್ತು ಸಹಜ ಸ್ಥಿತಿ ಮರಳಿ ತರಲು, ರಾಜ್ಯದಲ್ಲಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂಬ ಭರವಸೆ ಅಮಿತ್ ಶಾ ಅವರಿಂದ ಸಿಕ್ಕಿದೆ’ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸೋಮವಾರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನೂ ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.