ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಪರಿಷತ್‌ಗೆ ನಾಮನಿರ್ದೇಶನ: ಶಿಫಾರಸು ತಿರಸ್ಕಾರ

ಬಿಆರ್‌ಎಸ್‌ ಕಿಡಿ
Published 26 ಸೆಪ್ಟೆಂಬರ್ 2023, 14:49 IST
Last Updated 26 ಸೆಪ್ಟೆಂಬರ್ 2023, 14:49 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ): ಬಿಆರ್‌ಎಸ್‌ ಪಕ್ಷದ ಇಬ್ಬರು ಮುಖಂಡರನ್ನು ತೆಲಂಗಾಣದ ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವಂತೆ ಸಚಿವ ಸಂಪುಟ ಮಾಡಿದ್ದ ಶಿಫಾರಸನ್ನು ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ತಿರಸ್ಕರಿಸಿದ್ದಾರೆ.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ವಾಗ್ದಾಳಿ ನಡೆಸಿದ್ದು, ‘ಬಿಜೆಪಿ ಹಿಂದುಳಿದ ವರ್ಗಗಳನ್ನು ವಿರೋಧಿಸುವ ಪಕ್ಷ’ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ಪಕ್ಷದ ನಾಯಕ ಶ್ರವಣ್‌ ದಾಸೋಜು ಹಾಗೂ ಮಾಜಿ ಶಾಸಕ ಕುರ್ರಾ ಸತ್ಯನಾರಾಯಣ ಅವರನ್ನು ರಾಜ್ಯಪಾಲರ ಕೋಟಾದಡಿ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಸಚಿವ ಸಂಪುಟವು ತಮಿಳಿಸೈ ಸೌಂದರರಾಜನ್ ಅವರಿಗೆ ಶಿಫಾರಸು ಮಾಡಿತ್ತು. ಆದರೆ, ರಾಜ್ಯಪಾಲರು ಇದನ್ನು ತಿರಸ್ಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

‘ದೇಶದಲ್ಲಿ ಭಾರತದ ಸಂವಿಧಾನವಿದೆಯೋ? ಅಥವಾ ಭಾರತೀಯ ಜನತಾ ಪಕ್ಷದ ಸಂವಿಧಾನವಿದೆಯೋ? ಎಂಬ ಅನುಮಾನ ಕಾಡುತ್ತಿದೆ. ಬಹುತೇಕ ರಾಜ್ಯಗಳಲ್ಲಿನ ರಾಜ್ಯಪಾಲರ ನಡವಳಿಕೆ ಇದೇ ರೀತಿ ಇದೆ. ಜನರು ಇದನ್ನು ಗಮನಿಸುತ್ತಿದ್ದಾರೆ’ ಎಂದು ತಿಳಿಸಿದರು.

Cut-off box - null

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT