ಶ್ರೀನಗರ(ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ಗಣರಾಜ್ಯೋತ್ಸವ ದಿನದೊಂದು ಭದ್ರತಾ ವ್ಯವಸ್ಥೆಯ ಭಾಗವಾಗಿ ಕಡಿಮೆ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿಲಾಯಿತು. ಮೊದಲ ಬಾರಿಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಮಾನ್ಯವಾಗಿ ಕಾಶ್ಮೀರದ ಅತೀ ಸೂಕ್ಷ ಪ್ರದೇಶಗಳಲ್ಲಿ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿತ್ತು.
ಕಣಿವೆಯಲ್ಲಿನ ಪ್ರಮುಖ ಕಾರ್ಯಕ್ರಮ ಸ್ಥಳವಾದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂಗೆ ಹೋಗುವ ರಸ್ತೆಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ನಗರದ ಕೆಲವೇ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಜನರು ಮತ್ತು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
2005 ರಿಂದ ಕಣಿವೆಯಲ್ಲಿ ಭದ್ರತಾ ಕಾರ್ಯಾಚರಣೆಯ ಭಾಗವಾಗಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು. ಈ ಹಿಂದೆ ಉಗ್ರರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಐಇಡಿ ಸ್ಫೋಟವನ್ನು ಸ್ಫೋಟಿಸಲು ಮೊಬೈಲ್ ಫೋನ್ ಅನ್ನು ಉಪಯೋಗಿಸಿದ್ದರು.