ಜಮ್ಮು: 1989ರಲ್ಲಿ ಅಪಹರಣಗೊಂಡಿದ್ದ ಆಗಿನ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಪುತ್ರಿ, ರುಬೈಯಾ ಸಯೀದ್ ರಕ್ಷಿಸುವುದಕ್ಕಾಗಿ ಉಗ್ರರನ್ನು ಬಿಡುಗಡೆ ಮಾಡಿದ್ದೇ ಜಮ್ಮು–ಕಾಶ್ಮೀರದಲ್ಲಿ ಭಯೋತ್ಪಾದನೆ ಬೆಳೆಯಲು ಕಾರಣಗಳಲ್ಲೊಂದು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ.