ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪವನ್‌ ಖೇರಾ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್‌ ನಕಾರ

Published 4 ಜನವರಿ 2024, 16:08 IST
Last Updated 4 ಜನವರಿ 2024, 16:08 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ. 

ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಪ್ರಧಾನಿ ಅವರ ಹೆಸರನ್ನು ‘ನರೇಂದ್ರ ಗೌತಮ್‌ ದಾಸ್‌ ಮೋದಿ’ ಎಂದು ಉಲ್ಲೇಖಿಸಿರುವುದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮದ ವಿರುದ್ಧ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ನ್ಯಾಯಾಲಯ ಒಲವು ಹೊಂದಿಲ್ಲ ಎಂದು ತಿಳಿಸಿತು. 

ಖೇರಾ ಅವರು ಕಳೆದ ವರ್ಷ ಫೆಬ್ರುವರಿ 17 ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಅವರ ಹೆಸರಿನ ಜತೆ ‘ಗೌತಮ್ ದಾಸ್‌’ ಹೆಸರನ್ನೂ ಸೇರಿಸಿ ಹೇಳಿದ್ದರು. ಆ ಬಳಿಕ ತಮ್ಮ ಮಾತು ವಾಪಸ್‌ ಪಡೆದಿದ್ದರು. ಪ್ರಧಾನಿ ಮೋದಿ ಅವರ ತಂದೆಯ ಹೆಸರನ್ನು ತಪ್ಪಾಗಿ ಹೇಳಿ ಅವಹೇಳನ ಮಾಡಿದ್ದಾರೆ ಎಂಬ ಆರೋಪವನ್ನು ಖೇರಾ ಎದುರಿಸುತ್ತಿದ್ದಾರೆ.

ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸಲು ಅಲಹಾಬಾದ್‌ ಹೈಕೋರ್ಟ್‌ ನಿರಾಕರಿಸಿದ್ದರಿಂದ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT