ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ಕುರಿತ ‘ಶಿವಲಿಂಗದ ಮೇಲಿನ ಚೇಳು’ ಹೇಳಿಕೆ: ತರೂರ್ ವಿರುದ್ಧದ ಪ್ರಕರಣಕ್ಕೆ ತಡೆ

Published : 10 ಸೆಪ್ಟೆಂಬರ್ 2024, 14:36 IST
Last Updated : 10 ಸೆಪ್ಟೆಂಬರ್ 2024, 14:36 IST
ಫಾಲೋ ಮಾಡಿ
Comments

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ‘ಶಿವಲಿಂಗದ ಮೇಲಿನ ಚೇಳು’ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್‌ ಅವರ ವಿರುದ್ಧ ವಿಚಾರಣಾ ನ್ಯಾಯಾಲಯವೊಂದರಲ್ಲಿ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಆರ್. ಮಹಾದೇವನ್ ಅವರು ಇದ್ದ ವಿಭಾಗೀಯ ಪೀಠವು ದೆಹಲಿ ಪೊಲೀಸರಿಗೆ ಹಾಗೂ ದೂರುದಾರ, ಬಿಜೆಪಿ ಮುಖಂಡ ರಾಜೀವ್ ಬಬ್ಬರ್ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದೆ.

ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್‌ ನಿಲುವನ್ನು ಪ್ರಶ್ನಿಸಿ ತರೂರ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತರೂರ್ ಪರ ಹಾಜರಾದ ವಕೀಲ ಮೊಹಮ್ಮದ್ ಅಲಿ ಖಾನ್ ಅವರು, ‘ದೂರುದಾರರು ಬಾಧಿತ ವ್ಯಕ್ತಿ ಎಂದು ಹೇಳಲು ಸಾಧ್ಯವಿಲ್ಲ. ಹಾಗೆಯೇ ರಾಜಕೀಯ ಪಕ್ಷದ ಸದಸ್ಯರು ಕೂಡ ಬಾಧಿತರು ಎಂದು ಹೇಳಲು ಅವಕಾಶ ಇಲ್ಲ’ ಎಂದು ವಿವರಿಸಿದರು.

ತರೂರ್ ಅವರು ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ‘ಮೋದಿ ಅವರು ಶಿವಲಿಂಗದ ಮೇಲೆ ಕುಳಿತಿರುವ ಚೇಳು ಇದ್ದಂತೆ’ ಎಂದು ಹೇಳಿದ್ದರು ಎನ್ನಲಾಗಿದೆ.

‘ಈ ಮಾತನ್ನು ರೂಪಕದ ರೀತಿಯಲ್ಲಿ ಹೇಳಲಾಗಿದೆ. ನಾನು ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದೇನೆ. ಈ ಮಾತು ವ್ಯಕ್ತಿಯು (ಮೋದಿ) ಅಜೇಯತ್ವವನ್ನು ಹೇಳುತ್ತಿದೆ. ಇದರಲ್ಲಿ ಯಾರಿಗಾದರೂ ಆಕ್ಷೇಪಾರ್ಹ ಸಂಗತಿ ಏಕೆ ಕಾಣಬೇಕು ಎಂಬುದು ನನಗೆ ಗೊತ್ತಾಗುತ್ತಿಲ್ಲ’ ಎಂದು ನ್ಯಾಯಮೂರ್ತಿ ರಾಯ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT