ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಅವಹೇಳನ ಪ್ರಕರಣ: ಪವನ್‌ ಖೇರಾ ಅರ್ಜಿ ವಿಚಾರಣೆ ನಾಳೆ

Published 15 ಅಕ್ಟೋಬರ್ 2023, 13:08 IST
Last Updated 15 ಅಕ್ಟೋಬರ್ 2023, 13:08 IST
ಅಕ್ಷರ ಗಾತ್ರ

ನವದೆಹಲಿ: ತಮ್ಮ ಮೇಲೆ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣದ ರದ್ದತಿಗೆ ನಿರಾಕರಿಸಿದ ಉತ್ತರ ಪ್ರದೇಶದ ಅಲಹಾಬಾದ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡ ಪವನ್‌ ಖೇರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಹೆಸರನ್ನು ತಪ್ಪಾಗಿ ಹೇಳಿ ಅವಹೇಳನ ಮಾಡಿದ್ದಾರೆ ಎಂಬ ಆರೋಪ ಖೇರಾ ಅವರ ಮೇಲಿದೆ.

ಅಕ್ಟೋಬರ್‌ 13ರಂದೇ ಖೇರಾ ಸಲ್ಲಿಸಿರುವ ಅರ್ಜಿಯು ವಿಚಾರಣಾ ಪಟ್ಟಿಯಲ್ಲಿತ್ತು. ಆದರೆ, ಅವರ ಪರ ವಕೀಲರು ಹೆಚ್ಚುವರಿ ದಾಖಲೆಗಳನ್ನು ಹಾಜರುಪಡಿಸುವ ಕುರಿತಂತೆ ಕಾಲಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ಮುಂದೂಡಲಾಗಿತ್ತು.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಹಾಗೂ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠವು, ವಿಚಾರಣೆ ನಡೆಸಲಿದೆ.  

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. ಇದರ ಆಧಾರದ ಮೇಲೆ ಖೇರಾ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಅರ್ಜಿಯನ್ನು ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 482ರಡಿ ವಜಾಗೊಳಿಸಲು ಸಾಧ್ಯವಿಲ್ಲ ಎಂದು ಆಗಸ್ಟ್‌ 17ರಂದು ಹೈಕೋರ್ಟ್‌ ಹೇಳಿತ್ತು. 

ಅಸ್ಸಾಂ ಹಾಗೂ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಮುಖಂಡನ ವಿರುದ್ಧ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳನ್ನು ಒಟ್ಟಿಗೆ ಸೇರಿಸಿ ತನಿಖೆ ನಡೆಸುವಂತೆ ಲಖನೌದ ಹಜರತ್‌ಗಂಜ್ ಠಾಣೆಯ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಫೆಬ್ರುವರಿ 23ರಂದು ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಅಂದೇ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT