ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪದವಿ ಬಗ್ಗೆ ಅವಹೇಳನ: ವಿಚಾರಣೆಗೆ ತಡೆ ನೀಡಲು ಗುಜರಾತ್‌ ಹೈಕೋರ್ಟ್ ನಿರಾಕರಣೆ

ಮೋದಿ ಪದವಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಕೇಜ್ರಿವಾಲ್‌ ವಿರುದ್ಧದ ಮೊಕದ್ದಮೆ
Published 11 ಆಗಸ್ಟ್ 2023, 11:03 IST
Last Updated 11 ಆಗಸ್ಟ್ 2023, 11:03 IST
ಅಕ್ಷರ ಗಾತ್ರ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್‌ ಸಿಂಗ್‌ ವಿರುದ್ಧ ಗುಜರಾತ್‌ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಗೆ ತಡೆ ನೀಡಲು ಗುಜರಾತ್‌ ಹೈಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಮೆಟ್ರೊಪಾಲಿಟನ್‌ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಮೀರ್‌ ದಾವೆ ಅವರು, ಈ ಹಿಂದೆ ಕೇಜ್ರಿವಾಲ್‌ ಮತ್ತು ಸಂಜಯ್‌ ಸಿಂಗ್‌ ಅವರು ವಿಚಾರಣೆಗೆ ಹಾಜರಾಗುವುದಾಗಿ ಸೆಷನ್ಸ್‌ ನ್ಯಾಯಾಲಯಕ್ಕೆ ಭರವಸೆ ನೀಡಿದ್ದನ್ನು ಉಲ್ಲೇಖಿಸಿದರು.

ವಿಚಾರಣೆಗೆ ಹಾಜರಾಗುವಂತೆ ಮೆಟ್ರೊಪಾಲಿಟನ್‌ ನ್ಯಾಯಾಲಯವು ಕೇಜ್ರಿವಾಲ್‌ ಮತ್ತು ಸಂಜಯ್‌ ಸಿಂಗ್‌ ಅವರಿಗೆ ಸಮನ್ಸ್‌ ನೀಡಿತ್ತು. ಇದನ್ನು  ಪ್ರಶ್ನಿಸಿ ಇಬ್ಬರು ಮುಖಂಡರು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸೆಷನ್ಸ್‌ ನ್ಯಾಯಾಲಯವು ಈ ಅರ್ಜಿಯನ್ನು ತಳ್ಳಿ ಹಾಕಿತ್ತು. ಬಳಿಕ ಇವರು ಗುಜರಾತ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT