ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ವಿದ್ಯಾರ್ಹತೆ ಕುರಿತ ಹೇಳಿಕೆ: ಅರ್ಜಿ ವರ್ಗಾವಣೆಗೆ ಗುಜರಾತ್ ಹೈಕೋರ್ಟ್ ಸೂಚನೆ

Published 29 ಆಗಸ್ಟ್ 2023, 16:18 IST
Last Updated 29 ಆಗಸ್ಟ್ 2023, 16:18 IST
ಅಕ್ಷರ ಗಾತ್ರ

ಅಹಮದಾಬಾದ್: ಪ್ರಧಾನಿ ಅವರ ವಿದ್ಯಾರ್ಹತೆ ಕುರಿತ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆ ಕುರಿತು ವಿಚಾರಣಾ ನ್ಯಾಯಾಲಯದ ಸಮನ್ಸ್ ಅನ್ನು ಪ್ರಶ್ನಿಸಿ ಎಎಪಿ ನಾಯಕರಾದ ಅರವಿಂದ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಮೀರ್ ದವೆ ಅವರು ಎಎಪಿ ಮುಖಂಡರ ಅರ್ಜಿಯನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಮಂಗಳವಾರ ಸೆಷನ್ಸ್ ಕೋರ್ಟ್‌ಗೆ ನಿರ್ದೇಶನ ನೀಡಿದ್ದಾರೆ.

ಮತ್ತೊಬ್ಬ ನ್ಯಾಯಾಧೀಶರು ಈ ವಿಷಯ ಕುರಿತಂತೆ ಇನ್ನು 10 ದಿನಗಳಲ್ಲಿ ನಿರ್ಧಾರ ಪ್ರಕಟಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಇದೇ 31ರಂದು ಮೆಟ್ರೊಪಾಲಿಟನ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಬೇಕಿದೆ. ಆದರೆ, ವಿಚಾರಣೆ ನಡೆಸುತ್ತಿರುವ ಉಸ್ತುವಾರಿ ನ್ಯಾಯಾಧೀಶರು ರಜೆಯಲ್ಲಿದ್ದು, ಸೆಪ್ಟೆಂಬರ್ 16ಕ್ಕೆ ಪ್ರಕರಣವನ್ನು ಕಾಯ್ದಿರಿಸಿದ್ದರು. ಹಾಗಾಗಿ, ಎಎಪಿಯ ಇಬ್ಬರು ನಾಯಕರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT