ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಒಂದು ಹೆಚ್ಚುವರಿ ಮತವನ್ನು ತೋರಿಸಿವೆ ಎಂಬ ಆರೋಪ ಸುಳ್ಳು ಎಂದು ಕೇಂದ್ರ ಚುನಾವಣಾ ಆಯೋಗ, ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇವಿಎಂ ಮೂಲಕ ಚಲಾಯಿಸಲಾದ ಮತಗಳನ್ನು ವಿವಿ–ಪ್ಯಾಟ್ (ಮತದಾನ ದೃಢೀಕರಣ ರಸೀದಿ ಯಂತ್ರ) ರಸೀದಿ ಮೂಲಕ ತಾಳೆ ಮಾಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

‘ಅಣಕು ಮತದಾನದ ವೇಳೆ ಒಂದು ಹೆಚ್ಚುವರಿ ಮತವನ್ನು ತೋರಿಸಿದೆ ಎಂಬ ವರದಿ ಸುಳ್ಳು. ಜಿಲ್ಲಾಧಿಕಾರಿ ಅವರೂ ಈ ಬಗ್ಗೆ ಪರಿಶೀಲಿಸಿದ್ದು, ಆರೋಪ ಸುಳ್ಳು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ವಿವರವಾದ ವರದಿಯನ್ನು ನಾವು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ’ ಎಂದು ಉಪ ಚುನಾವಣಾ ಆಯುಕ್ತ ನಿತೇಶ್ ಕುಮಾರ್ ವ್ಯಾಸ್ ಅವರು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರಿದ್ದ ಪೀಠಕ್ಕೆ ತಿಳಿಸಿದರು.

ಅರ್ಜಿದಾರ ಎನ್‌ಜಿಒ 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್' ಪರ ಹಾಜರಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ಅಣಕು ಮತದಾನದ ವೇಳೆ ಇವಿಎಂಗಳು ಒಂದು ಹೆಚ್ಚುವರಿ ಮತವನ್ನು ತೋರಿಸುತ್ತಿರುವ ಬಗ್ಗೆ ವರದಿಗಳಿವೆ ಎಂದು ಪೀಠಕ್ಕೆ ತಿಳಿಸಿದರು. ಈ ಬಗ್ಗೆ ಪರಿಶೀಲಿಸುವಂತೆ ಚುನಾವಣಾ ಆಯೋಗದ ಪರ ಹಾಜರಿದ್ದ ಹಿರಿಯ ವಕೀಲ ಮಣಿಂದರ್ ಸಿಂಗ್ ಅವರಿಗೆ ಪೀಠವು ಸೂಚಿಸಿತು.

ದೂರು ನೀಡಲು ಎಲ್‌ಡಿಎಫ್ ನಿರ್ಧಾರ

ಕಾಸರಗೋಡು : ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಡೆದ ಅಣಕು ಮತದಾನದ ವೇಳೆ ಕೆಲವು ಮತಯಂತ್ರಗಳಲ್ಲಿ ದೋಷ ಕಂಡುಬಂದಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಹೇಳಿದೆ.

‘ಬೇರೆ ಪಕ್ಷದ ಅಭ್ಯರ್ಥಿಗೆ ಹಾಕಿದ ಮತಗಳು ಬಿಜೆಪಿ ಅಭ್ಯರ್ಥಿಯ ಪರ ದಾಖಲಾಗಿವೆ. ಬುಧವಾರ ನಡೆದ ಅಣಕು ಮತದಾನದ ಸಮಯದಲ್ಲಿ 2–3 ಮತಯಂತ್ರಗಳಲ್ಲಿ ಇಂತಹ ದೋಷ ಕಂಡುಬಂದಿವೆ’ ಎಂದು ಸಿಪಿಎಂ ಮುಖಂಡ ಕೆ.ಪಿ.ಸತೀಶ್ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.