ಕಣ್ಣೂರ್: ಕೇರಳ ಸಚಿವ ರಾಮಚಂದ್ರನ್ ಕಡನಪಲ್ಲಿ ಅವರು ಗಣರಾಜ್ಯೋತ್ಸವದ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಕಣ್ಣೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗಹಿಸಿದ್ದ ಸಚಿವ, ವೇದಿಕೆಯಲ್ಲಿದ್ದಾಗಲೇ ಅಸ್ವಸ್ಥರಾಗಿದ್ದಾರೆ. ಹಿಮ್ಮುಖವಾಗಿ ಬೀಳುತ್ತಿದ್ದ ಅವರನ್ನು ಪಕ್ಕದಲ್ಲೇ ಇದ್ದ ಭದ್ರತಾ ಸಿಬ್ಬಂದಿ ಕೆಳಗೆ ಬೀಳದಂತೆ ಹಿಡಿದುಕೊಂಡಿದ್ದಾರೆ. ಇದರಿಂದಾಗಿ ಅಪಾಯ ತಪ್ಪಿದೆ.

ತಕ್ಷಣವೇ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಸುಧಾರಿಸಿಕೊಂಡ ಸಚಿವರು ಆ್ಯಂಬುಲೆನ್ಸ್ನತ್ತ ನಡೆದುಕೊಂಡು ಹೋಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿದೆ.

ಆರೋಗ್ಯದ ಸ್ಥಿತಿ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ದೇಶದಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿರುವ ಕರ್ತವ್ಯ ಪಥದಲ್ಲಿ ಸೇನಾ ಪಡೆಗಳು ಪಥಸಂಚನ ನಡೆಸಿ, ಸಾಮರ್ಥ್ಯವನ್ನು ಅನಾವರಣಗೊಳಿಸಿವೆ. ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡು, ದೇಶದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಸಾರ ಮಾಡಿವೆ.

ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕರ್ಥವ್ಯಪಥದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಇದೇ ಪರಿಕಲ್ಪನೆಯಲ್ಲಿ ರೂಪಿಸಲಾದ ಸ್ತಬ್ಧ ಚಿತ್ರ ಗಮನ ಸೆಳೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.