ನವದೆಹಲಿ: ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಜುಲೈ 12 ರಂದು ಎಲ್ಲಾ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗಜೇಂದ್ರ ಸಿಂಗ್ ನಗರ್ ನಿರ್ದೇಶಿಸಿದರು.

ಓದಿ:ಟ್ರ್ಯಾಕ್ಟರ್ ರ್ಯಾಲಿ ಗಲಭೆ: ಆರೋಪಿ ಸಿಧು ಮತ್ತಿತರರ ವಿರುದ್ಧ ಪೂರಕ ಚಾರ್ಜ್ಶೀಟ್

ಈ ಹಿಂದೆ ನ್ಯಾಯಾಲಯವು ಆರೋಪಿಗಳಿಗೆ ಮಂಗಳವಾರ (ಜೂನ್ 29) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಕೇವಲ ಹರ್ಜೊತ್ ಸಿಂಗ್ ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು.

‘ನ್ಯಾಯಾಲಯ ಜಾರಿಗೊಳಿಸಿದ ಸಮನ್ಸ್ ಆರೋಪಿಗಳಿಗೆ ಸಿಕ್ಕಿಲ್ಲ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗಿಲ್ಲ’ ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್, ಮತ್ತೊಮ್ಮೆ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.