ನವದೆಹಲಿ: ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಜನರ ದಾರಿ ತಪ್ಪಿಸುವಂಥ ಟ್ವೀಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್, ಹಿರಿಯ ಪತ್ರಕರ್ತ ರಾಜದೀಪ್ ಸರ್‌ದೇಸಾಯಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಪತ್ರಕರ್ತರಾದ ಮೃಣಾಲ್ ಪಾಂಡೆ, ಜಫರ್ ಆಘಾ, ಪರೇಶ್ ನಾಥ್ ಹಾಗೂ ಅನಂತನಾಥ್ ಅವರು ಸಹ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರ| 38 ದೂರು, 80ಕ್ಕೂ ಹೆಚ್ಚು ಬಂಧನ

ದೆಹಲಿ ಪೊಲೀಸರು ಸಂಸದ ತರೂರ್, ಪತ್ರಕರ್ತ ರಾಜ್‌ದೀಪ್, ಕ್ಯಾರವಾನ್ ಪೋರ್ಟಲ್ ಹಾಗೂ ಇತರರ ವಿರುದ್ಧ ಜ. 30ರಂದು ಎಫ್‌ಐಆರ್ ದಾಖಲಿಸಿದ್ದಾರೆ.

ತರೂರ್ ಹಾಗೂ ಆರು ಜನ ಪತ್ರಕರ್ತರ ವಿರುದ್ಧ ನೋಯ್ಡಾ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಇವರೆಲ್ಲರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಸಹ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬಂಧಿತರನ್ನು ಬಿಡುಗಡೆ ಮಾಡುವವರೆಗೆ ಮಾತುಕತೆ ಸಾಧ್ಯವಿಲ್ಲ: ಕಿಸಾನ್ ಮೋರ್ಚಾ ಪಟ್ಟು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.