ನವದೆಹಲಿ: ‘ಪ್ರಬಲ ಜಾತಿಯಲ್ಲಿ ಹುಟ್ಟಿದವರು ಮೀಸಲಾತಿ ಸೌಲಭ್ಯ ಪಡೆದುಕೊಳ್ಳುವುದಕ್ಕಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮತಾಂತರಗೊಳ್ಳುವ ಹೊಸ ರೀತಿಯ ವಂಚನೆ ಆರಂಭವಾಗಿದೆ’ ಎಂದು ಸುಪ್ರೀಂ ಕೋರ್ಟ್ ಬುಧವಾರ ಕಳವಳ ವ್ಯಕ್ತಪಡಿಸಿದೆ.

‘ಯಾವ ಆಧಾರದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ನೀಡುವ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಈ ಬಗ್ಗೆ ನಮಗೆ ವರದಿ ನೀಡಿ’ ಎಂದು ಹರಿಯಾಣದ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾ. ಜಾಯ್ ಮಾಲ್ಯಾ ಬಾಗ್ಚಿ ಅವರು ವಿಚಾರಣೆ ನಡೆಸಿದರು.

‘ಅಲ್ಪಸಂಖ್ಯಾತ ಅಭ್ಯರ್ಥಿಯಾಗಿ ದಾಖಲಾತಿಗೆ ಅನುಮತಿ ನೀಡಬೇಕು’ ಎಂದು ಕೋರಿ ಹರಿಯಾಣದ ನಿಖಿಲ್ ಕುಮಾರ್ ಪುನಿಯಾ ಎಂಬುವರು ಅರ್ಜಿ ಸಲ್ಲಿಸಿದ್ದರು. ತಾನು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ನಿಖಿಲ್ ಹೇಳಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.