ನವದೆಹಲಿ: ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಿಗೆ ಮೀಸಲಾತಿ ಕಲ್ಪಿಸುವ ಕುರಿತ ಪುನರ್‌ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದರೆ ಸುಗ್ರೀವಾಜ್ಞೆ ಅಥವಾ ಮಸೂದೆ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಅಲ್ಲಿಯವರೆಗೂ ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿಗೆ ಅವಕಾಶ ನೀಡುವುದಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ರಾಜ್ಯಸಭೆಯಲ್ಲಿ ಶುಕ್ರವಾರ ತಿಳಿಸಿದರು.

30 ವಿಶ್ವವಿದ್ಯಾಲಯಗಳಲ್ಲಿಪ್ರಾಧ್ಯಾಪಕರಿಗೆ ಮೀಸಲಾತಿ ಕಲ್ಪಿಸುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಾಧ್ಯಾಪಕರಿಗೆ ಮೀಸಲಾತಿ ಕುರಿತ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದರಿಂದ ಸರ್ಕಾರ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.