ನವದೆಹಲಿ: ಕೇಂದ್ರದ ಮಹತ್ವದ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಕಾರಿಗಳ ಹೆಸರುಗಳನ್ನು ಶಿಫಾರಸು ಮಾಡುವ ವೇಳೆ ಮಹಿಳೆಯರು, ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) ಸೇರಿದವರಿಗೆ ಆದ್ಯತೆ ನೀಡಿ ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸೂಚನೆ ನೀಡಿದೆ.

ಕೇಂದ್ರ ಸೇವೆಗಳಲ್ಲಿ ಮಹಿಳೆಯರು, ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎನ್ನುವ ದೃಷ್ಟಿಯಿಂದ ಈ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಬಗ್ಗೆ ಕೇಂದ್ರ ಸಿಬ್ಬಂದಿ ಸಚಿವಾಲಯವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಡಿ.10ರಂದು ಪತ್ರ ಬರೆದಿದೆ.

ಕೇಂದ್ರದ ಸರ್ಕಾರಿ ಸ್ವಾಮ್ಯದ ಉದ್ಯಮಗಳು (ಸಿಪಿಎಸ್ಇ) ಸೇರಿದಂತೆ ಹಲವು ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಯುವ ಸಲುವಾಗಿ ಇರುವ ಮುಖ್ಯ ವಿಚಕ್ಷಣ ಅಧಿಕಾರಿ (ಸಿವಿಒ) ಹುದ್ದೆಗಳಿಗೆ ಕೇಂದ್ರ ಸಿಬ್ಬಂದಿ ಯೋಜನೆ (ಸಿಎಸ್ಎಸ್) ಅಡಿಯಲ್ಲಿ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ವಿವಿಧ ಇಲಾಖೆಗಳ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ನಿರ್ದೇಶಕರು, ಉಪ ಕಾರ್ಯದರ್ಶಿ ಹುದ್ದೆಗಳಿಗೂ ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.