ನವದೆಹಲಿ: ‘ಎಲ್ಲ ವರ್ಗಗಳ ಜನತೆ ಸರ್ಕಾರಿ ನೌಕರಿ ಪಡೆಯಲು ಸಮಾನ ಅವಕಾಶ ದೊರೆಯದ್ದರಿಂದ, ವಿಶೇ ಷವಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೀಸಲಾತಿ ಪದ್ಧತಿ ಜಾರಿಗೊಳಿಸಲಾಗಿದೆ. ಬಡ್ತಿ ನೀಡುವಾಗಲೂ ಇದೇ ಮಾದರಿ ಅನುಸರಿಸಲಾಗುತ್ತಿದೆ’ ಎಂದು ಹಿರಿಯ ವಕೀಲ ದಿನೇಶ್ ದ್ವಿವೇದಿ ಹೇಳಿದರು.

‘ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಸಲ್ಲಿಸಿರುವ ಮೇಲ್ಮನವಿಯ ಮುಂದುವರಿದ ವಿಚಾರಣೆ ವೇಳೆ ಅವರು ಪರಿಶಿಷ್ಟ ಜಾತ,ಪಂಗಡಗಳ ನೌಕರರ ಪರ ವಾದಿಸಿದರು.

ತತ್ಪರಿಣಾಮ ಜ್ಯೇಷ್ಠತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ಕ್ಯಾಚ್ ಅಪ್’ ನಿಯಮ ಅಳವಡಿಸಿದೆ. ಇದಕ್ಕೆ ಸಂವಿಧಾನದ ಮಾನ್ಯತೆಯನ್ನು ಕಲ್ಪಿಸಲೆಂದೇ ಕಾಯ್ದೆ ರೂಪಿಸಲಾಗುತ್ತಿದೆ ಎಂದು ಅವರು ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠಕ್ಕೆ ತಿಳಿಸಿದರು.

‘ಕ್ಯಾಚ್ ಅಪ್’ ನಿಯಮದ ಉದ್ದೇಶವು ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವುದೇ ಆಗಿದೆ ಎಂದು ಅವರು ಪ್ರತಿಪಾದಿಸಿದರು. ಪ್ರಕರ ಣದ ವಿಚಾರಣೆಯನ್ನು ಫೆ. 5ಕ್ಕೆ ಮುಂದೂಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.