ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರ ಅಮಾನತು ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Last Updated 28 ಜನವರಿ 2022, 7:25 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯ ಕಲಾಪದ ವೇಳೆ ಸ್ಪೀಕರ್ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಒಂದು ವರ್ಷದವರೆಗೆ ಸದನದಿಂದ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) 12 ಶಾಸಕರ ಅಮಾನತು ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಒಂದು ಅಧಿವೇಶನಕ್ಕಿಂತಲೂ ಹೆಚ್ಚು ಕಾಲ ಶಾಸಕರನ್ನು ಅಮಾನತು ಮಾಡಿರುವುದು 'ಅಸಾಂವಿಧಾನಿಕ', 'ಕಾನೂನು ಬಾಹಿರ' ಮತ್ತು 'ವಿಚಾರಹೀನ' ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದಾಗಿ ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿಮೈತ್ರಿಕೂಟಕ್ಕೆ ತೀವ್ರ ಮುಖಭಂಗ ಎದುರಾಗಿದೆ.

ಮಹಾರಾಷ್ಟ್ರದ ಸದನದಲ್ಲಿ ಅಂಗೀಕರಿಸಿದ ಅಮಾನತು ನಿರ್ಣಯವನ್ನು ಪ್ರಶ್ನಿಸಿ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಕಳೆದ ವರ್ಷ ಜುಲೈ 5ರಂದು ಸ್ಪೀಕರ್ ಭಾಸ್ಕರ್ ಜಾಧವ್ ಅವರ ಬಳಿ ಅನುಚಿತ ವರ್ತನೆಗೆ ಸಂಬಂಧಿಸಿದಂತೆ 12 ಶಾಸಕರನ್ನು ಒಂದು ವರ್ಷ ಅಮಾನತು ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT