ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರಾಮುಲ್ಲಾ: ನಿವೃತ್ತ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು

Published 24 ಡಿಸೆಂಬರ್ 2023, 5:23 IST
Last Updated 24 ಡಿಸೆಂಬರ್ 2023, 5:23 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾನುವಾರ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್ ಶಫಿ ಹತ್ಯೆಯಾದ ನಿವೃತ್ತ ಪೊಲೀಸ್ ಅಧಿಕಾರಿ. ಇಂದು ಮುಂಜಾನೆ ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುತ್ತಿದ್ದಾಗ ಭಯೋತ್ಪಾದಕರು ಶಫಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಎಂದು ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT