ನವದೆಹಲಿ: ಜಂಟಿ ಸಂಸದೀಯ ಸಮಿತಿ ಪರಿಶೀಲನೆಗೆ ಒಳಪಟ್ಟಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ನಾಳೆ (ಬುಧವಾರ) ಲೋಕಸಭೆಯಲ್ಲಿ ಮಂಡಿಸಲಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಕುರಿತಾದ ಚರ್ಚೆಗೆ ಎಂಟು ಗಂಟೆಗಳ ಸಮಯ ಮೀಸಲಿಡಲಾಗಿದೆ. ಜತೆಗೆ, ಬುಧವಾರವೇ ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿ ಮರುದಿನ ರಾಜ್ಯಸಭೆಯಲ್ಲಿ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಚರ್ಚೆಗೆ 12 ಗಂಟೆಗಳ ಕಾಲಾವಕಾಶ ಹಾಗೂ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಕುರಿತು ಚರ್ಚೆ ಮತ್ತು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಲು ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ವರದಿಯಾಗಿದೆ.

ಇದರ ನಡುವೆಯೇ, ಪ್ರಸ್ತಾಪಿತ ಮಸೂದೆ ಬಗ್ಗೆ ಸುಳ್ಳು ಮತ್ತು ತಪ್ಪು ಮಾಹಿತಿಗಳು ಎಲ್ಲ ದಾಖಲೆಗಳನ್ನು ಮೀರಿ ವ್ಯಾಪಿಸುತ್ತಿದ್ದು, ಈ ಬಗ್ಗೆ ಸಂಸತ್ತಿನ ಕಲಾಪದಲ್ಲಿ ಚರ್ಚೆಯಾಗಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಸೋಮವಾರ ಒತ್ತಾಯಿಸಿದ್ದರು.

ಸಂಸತ್ತಿನ ಬಜೆಟ್ ಅಧಿವೇಶನವು ಏ.4ರಂದು ಮುಕ್ತಾಯವಾಗಲಿದೆ. ವಕ್ಫ್ ತಿದ್ದುಪಡಿ ಮಸೂದೆ ಕಾಯ್ದೆಯಾಗಲು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರ ಪಡೆಯಬೇಕು. ಹೀಗಾಗಿ, ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದರೂ, ಸಮಯದ ಕೊರತೆ ಕಾರಣ ರಾಜ್ಯಸಭೆಯಲ್ಲಿ ಮಸೂದೆಗೆ ಅನುಮೋದನೆ ಸಿಗುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.
.ವಕ್ಫ್ ತಿದ್ದುಪಡಿ ಮಸೂದೆ: ಆಡಳಿತ, ವಿರೋಧ ಪಕ್ಷಗಳ ವಾಕ್ ಸಮರ.ವಕ್ಫ್ ತಿದ್ದುಪಡಿ ಮಸೂದೆ: ಜಂಟಿ ಸದನ ಸಮಿತಿಗೆ ಶಿಫಾರಸು ಮಾಡಿದ ಸರ್ಕಾರ.ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಶೀಘ್ರ ಅಂಗೀಕಾರವಾಗಲಿದೆ: ಅಮಿತ್ ಶಾ.ವಕ್ಫ್ ತಿದ್ದುಪಡಿ ಮಸೂದೆ | ದೇಶದಲ್ಲಿ ದಂಗೆ ಎಬ್ಬಿಸುವ ಹುನ್ನಾರ: ನಾಸೀರ್ ಹುಸೇನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.