ಕೋಲ್ಕತ್ತ: ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ತಮಗೆ ನ್ಯಾಯ ಕೊಡಿಸುವಂತೆ ವಿದ್ಯಾರ್ಥಿನಿಯ ಪೋಷಕರು ಮನವಿ ಮಾಡಿದ್ದಾರೆ.

ಫೆ.9ರಂದು 32ನೇ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗಳು ಕ್ರೂರವಾಗಿ ಹತ್ಯೆಯಾಗಿದ್ದಾಳೆ. ಘಟನೆ ನಡೆದ ದಿನದಿಂದಲೂ ಬೆಂಬಲ ವ್ಯಕ್ತಪಡಿಸಿರುವವರು ಆಕೆಯ ಜನ್ಮದಿನದಂದು ನ್ಯಾಯಕ್ಕಾಗಿ ಆಗ್ರಹಿಸಿ ರಸ್ತೆಗಿಳಿದು ಪ್ರತಿಭಟಿಸಬೇಕು ಎಂದು ಕೋರಿದ್ದಾರೆ.

‘ನಮ್ಮ ಮಗಳ ಸಾವಿಗೆ ನ್ಯಾಯ ಸಿಗುವ ತನಕವೂ ಹೋರಾಟ ಮುಂದುವರಿಸುವುದಾಗಿ’ ಪೋಷಕರು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

‘ನ್ಯಾಯ ದೊರಕಿಸಿಕೊಡುವಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಎಲ್ಲರೂ ದೀಪಗಳನ್ನು ಬೆಳಗಿಸುವ’ ಮೂಲಕ ಪ್ರತಿಭಟನೆಯಲ್ಲಿ ಭಾಗಿಯಾಗಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.