ನವದೆಹಲಿ: ‘ಜಿಲ್ಲಾ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗುಣಪಡಿಸಲಾಗದ ಕಾಯಿಲೆ ತುತ್ತಾಗಿರುವವರಿಗೆ ಆರೈಕೆ ಒದಗಿಸಲು ಅಗತ್ಯ ಮೂಲಸೌಕರ್ಯವನ್ನು ಕಡ್ಡಾಯಗೊಳಿಸುವ ಜೊತೆಗೆ ಘನತೆಯಿಂದ ಸಾಯುವ ಹಕ್ಕು ಅವಕಾಶ ಕಲ್ಪಿಸುವ ಕಾನೂನು ಜಾರಿಗೊಳಿಸಬೇಕು’ ಎಂದು ಮುಸ್ಲಿಂಲೀಗ್ನ ರಾಜ್ಯಸಭಾ ಸದಸ್ಯ ಹ್ಯಾರಿಸ್ ಬೀರನ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯಸಭೆಯಲ್ಲಿ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಹಲವು ಸಲ ನಿರ್ದೇಶನ ನೀಡಿದೆ. ಕಾನೂನು ಆಯೋಗವು ವರದಿ ನೀಡಿದೆ. ಹೀಗಿದ್ದೂ ಸಂಸತ್ ಈ ಕುರಿತು ಕಾನೂನು ರೂಪಿಸುವಲ್ಲಿ ವಿಫಲವಾಗಿದೆ. ಹೀಗಾಗಿಯೇ, ಹರೀಶ್ ರಾಣಾ ಎಂಬುವವರಿಗೆ ಜೀವರಕ್ಷಕ ವ್ಯವಸ್ಥೆ ಕೈಬಿಟ್ಟು, ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಅವಕಾಶ ಕೊಟ್ಟಿದೆ’ ಎಂದು ತಿಳಿಸಿದ್ದಾರೆ.

‘ಕಾನೂನು ಆಯೋಗದ ಶಿಫಾರಸಿನಂತೆ, ಗುಣಪಡಿಸಲಾಗದ ಕಾಯಿಲೆ ಹೊಂದಿರುವ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ಕಾಯ್ದೆ ಜಾರಿಗೆ ತರಬೇಕು. ಇಂತಹವರಿಗೆ ಚಿಕಿತ್ಸೆ ಒದಗಿಸಲು ಜಿಲ್ಲಾ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮೂಲಸೌಕರ್ಯ ಒದಗಿಸುವುದನ್ನು ಕಡ್ಡಾಯಗೊಳಿಸಬೇಕು’ ಎಂದು ಈ ವೇಳೆ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.