ಪುಣೆ: ಇಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತೆ ಲಾಕ್ಡೌನ್ ಮಾಡುವಂತೆ ಒತ್ತಾಯಿಸಿದ್ದಾರೆ.

ಆದರೆ, ಕೆಲವರು ಲಾಕ್ಡೌನ್ ಬೇಡ, ಸಮರ್ಪಕ ಆರೋಗ್ಯ ಸೇಮೆ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಹೇಳುತ್ತಿದ್ದಾರೆ.

ಚುನಾಯಿತ ಪ್ರತಿನಿಧಿಗಳು ದೀಘಿ, ಹಿಂಜೇವಾಡಿ, ದೇಹುಗಾಂವ್ ಮತ್ತು ಚಕನ್ ಪ್ರದೇಶಗಳಲ್ಲಿ 10 ದಿನಗಳವರೆಗೂ ಲಾಕ್ಡೌನ್ ಮಾಡಿದರೆ ವ್ಯಾಪಕವಾಗಿ ಸೋಂಕು ಹರಡುವುದನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋಂಕು ಗ್ರಾಮೀಣ ಭಾಗಗಳಲ್ಲೂ ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ಲಾಕ್ಡೌನ್ ಅನಿವಾರ್ಯವಾಗಿದೆ. ಕೈಗಾರಿಕಾ ಪ್ರದೇಶಗಳಲ್ಲಿನ ಚಟುವಟಿಕೆಗಳಿಗೆ ಅನುಮತಿ ನೀಡಿ, ಲಾಕ್ಡೌನ್ ಮಾಡಬೇಕು ಎಂದು ಖೇಡ್ ಕ್ಷೇತ್ರದ ಶಾಸಕ ದಿಲೀಪ್ ಮೋಹಿತೆ ಪಾಟೀಲ್ ಹೇಳಿದ್ದಾರೆ.

ಆದರೆ, ಚಿಂಚ್ವಾಡ್ ಕ್ಷೇತ್ರದ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಹಾಗೂ ಎನ್ ಸಿಪಿ ಸಂಸದ ಡಾ.ಅಮೋಲ್ ಕೋಲ್ಹೆ ಅವರು ಈಗ ಮತ್ತೆ ಲಾಕ್ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ, ಜನರಿಗೆ ಆರೋಗ್ಯ ಸೇವೆಗಳನ್ನು ಹೆಚ್ಚಿಸಬೇಕು ಹಾಗೂ ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೋಲ್ಹೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.