ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಗಾಳಿ; ಪಾಲಕ್ಕಾಡ್‌ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌

Published 30 ಏಪ್ರಿಲ್ 2024, 15:36 IST
Last Updated 30 ಏಪ್ರಿಲ್ 2024, 15:36 IST
ಅಕ್ಷರ ಗಾತ್ರ

ತಿರುವನಂತಪುರ: ಇಲ್ಲಿನ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಮೇ 2ವರೆಗೂ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಆರೆಂಜ್‌ ಅಲರ್ಟ್‌ ಬಿಡುಗಡೆ ಮಾಡಿದೆ.

ಹಾಗೆಯೇ ತ್ರಿಶ್ಶೂರ್‌, ಆಲಪ್ಪುಳ, ಕೋಯಿಕ್ಕೋಡ್‌ನಲ್ಲಿಯೂ  ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಯೆಲ್ಲೋ ಅಲರ್ಟ್‌ ಬಿಡುಗಡೆ ಮಾಡಿದೆ.

ಇಂದಿನಿಂದ ಮೇ 4ರವರೆಗೆ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಗರಿಷ್ಠ 41 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ, ತ್ರಿಶ್ಶೂರ್‌ನಲ್ಲಿ 40 ಡಿಗ್ರಿ ಸೆಲ್ಸಿಯಸ್‌, ಕೊಲ್ಲಂ, ಕೋಯಿಕ್ಕೋಡ್‌ನಲ್ಲಿ ಅಂದಾಜು 39 ಡಿಗ್ರಿ ಸೆಲ್ಸಿಯಸ್‌ ಮತ್ತು ಅಲಪ್ಪುಳ, ಪಟ್ಟಣಂತಿಟ್ಟು, ಕಣ್ಣೂರು ಜಿಲ್ಲೆಗಳಲ್ಲಿ ಅಂದಾಜು 38 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ ಎಂದು ಹೇಳಿದೆ.

ಈ ಜಿಲ್ಲೆಗಳಲ್ಲಿ ಸೆಖೆ ಮತ್ತು ಆರ್ಧ್ರ ವಾತಾವರಣ ಮೇ 4ವರೆಗೂ ಇರಲಿದೆ ಎಂದು ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT