ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

34 ನದಿಗಳ ಶುದ್ಧೀಕರಣಕ್ಕೆ ₹5800 ಕೋಟಿ ಮಂಜೂರು

Last Updated 21 ಜುಲೈ 2019, 19:44 IST
ಅಕ್ಷರ ಗಾತ್ರ

ನವದೆಹಲಿ : ಗಂಗಾ ನದಿ ಸೇರಿದಂತೆ 16 ರಾಜ್ಯಗಳ 34 ನದಿಗಳ ಮಾಲಿನ್ಯ ನಿಯಂತ್ರಣಕ್ಕೆ ₹5,800 ಕೋಟಿ ಮಂಜೂರಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತಿಳಿಸಿದೆ.

ಲೋಕಸಭೆಯಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ ಪರಿಸರ ಖಾತೆ ರಾಜ್ಯ ಸಚಿವ ಬಾಬುಲ್ ಸುಪ್ರಿಯೊ, ರಾಷ್ಟ್ರೀಯ ನದಿ ಸಂರಕ್ಷಣಾ ಯೋಜನೆಯಡಿ (ಎನ್‌ಆರ್‌ಸಿಪಿ) ನದಿಗಳ ಶುದ್ಧೀಕರಣ ಕೆಲಸಕ್ಕೆ ಕೇಂದ್ರದ ಪಾಲು ₹2,522 ಕೋಟಿಯನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಎಂದರು.

ಇದೇ ಯೋಜನೆಯಡಿ ಕಳೆದ ವರ್ಷ 9 ರಾಜ್ಯಗಳಿಗೆ ₹143 ಕೋಟಿ ಬಿಡುಗಡೆ ಮಾಡಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ 20 ರಾಜ್ಯಗಳಿಗೆ ₹181 ಕೋಟಿ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ 351 ಕಡೆಗಳಲ್ಲಿ ನದಿಗಳ ಮಾಲಿನ್ಯವನ್ನು ಗುರುತಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT