ಚೆನ್ನೈ: ತಮಿಳುನಾಡು ನೂತನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಅವರು ಪ್ರಮಾಣವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷದ ನಾಯಕ ಕೆ. ಪಳನಿಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.

ಈ ಬಳಿಕ ಸ್ಟಾಲಿನ್ ಅವರು ರಾಜ್ಯ ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ಸಂಪುಟ ಸದಸ್ಯರನ್ನು ಅವರಿಗೆ ಪರಿಚಯಿಸಿದರು.

ಓದಿ:ಮಹಾರಾಷ್ಟ್ರ ರಾಜಕೀಯ: ಬಿಜೆಪಿ–ಸೇನಾ ಮೈತ್ರಿ ಬಗ್ಗೆ ಚಿಗುರೊಡೆದ ‘ಹೇಳಿಕೆಗಳು’

ಈ ಹಿಂದಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಪಂಜಾಬ್‌ಗೆ ವರ್ಗಾಯಿಸಲಾಗಿದೆ.

ಕಳೆದ ವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರ್.ಎನ್ ರವಿ ಅವರನ್ನು ತಮಿಳುನಾಡು ರಾಜ್ಯಪಾಲರಾಗಿ ನೇಮಿಸಿದರು. ಮಾಜಿ ಐಪಿಎಸ್ ಅಧಿಕಾರಿಯಾಗಿರುವ ರವಿ ಅವರು ಈ ಹಿಂದೆ ಕೇಂದ್ರ ಸರ್ಕಾರದ ನಾಗಾ ಶಾಂತಿ ಮಾತುಕತೆಯ ಸಂವಾದಕರಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.