ಕೋಲ್ಕತ್ತ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹಸ್ಖಾಲಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಟ್ರಕ್– ಮೆಟಡೋರ್ ಮಧ್ಯ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

‘ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 30 ಜನರಿದ್ದ ಮೆಟಡೋರ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

11 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಏಳು ಮಂದಿಯನ್ನು ಶಕ್ತಿನಗರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರೆಲ್ಲರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತಿಬ್ಬರನ್ನು ಎನ್ಆರ್ಎಸ್ ಮೆಡಿಕಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಫುಲ್ಬರಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದುರಂತಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.