ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಸ್ಥಾನ: ರಸ್ತೆ ಅಪಘಾತದಲ್ಲಿ ಐವರು ಪೊಲೀಸರ ಸಾವು

Published 19 ನವೆಂಬರ್ 2023, 6:54 IST
Last Updated 19 ನವೆಂಬರ್ 2023, 6:54 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಪೊಲೀಸ್ ವಾಹನವು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಸುಜನ್‌ಗಢ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಚುರು ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ನಾಯಕ್ ತಿಳಿಸಿದ್ದಾರೆ.

ಚುನಾವಣಾ ಸಭೆಯಲ್ಲಿ ಪಾಲ್ಗೊಳ್ಳಲು ಪೊಲೀಸರು ತಾರಾನಗರಕ್ಕೆ ತೆರಳುತ್ತಿದ್ದರು.

ಮೃತ ಪೊಲೀಸರನ್ನು ಖಿಂವ್ಸರ್ ಪೊಲೀಸ್ ಠಾಣೆಯ ಎಎಸ್‌ಐ ರಾಮಚಂದ್ರ, ಕಾನ್‌ಸ್ಟೆಬಲ್‌ಗಳಾದ ಕುಂಭರಾಮ್, ಸುರೇಶ್ ಮೀನಾ, ಥನರಾಮ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸಂತಾಪ ಸೂಚಿಸಿದ್ದಾರೆ.

;ಇಂದು ಮುಂಜಾನೆ, ಚುರುವಿನ ಸುಜನ್‌ಗಢ್ ಸದರ್ ಪ್ರದೇಶದಲ್ಲಿ ವಾಹನ ಅಪಘಾತದಲ್ಲಿ ಪೊಲೀಸರು ಮೃತಪಟ್ಟಿರುವ ದುಃಖದ ಸುದ್ದಿ ಬಂದಿದೆ. ಈ ಅಪಘಾತದಲ್ಲಿ ಸಾವಿಗೀಡಾದ ಎಲ್ಲಾ ಪೊಲೀಸರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಾದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT