ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ | ಅಪಘಾತ: ಮದುವೆ ಮುಗಿಸಿ ಬರುತ್ತಿದ್ದ 9 ಮಂದಿ ಸಾವು

Published 21 ಏಪ್ರಿಲ್ 2024, 4:24 IST
Last Updated 21 ಏಪ್ರಿಲ್ 2024, 4:24 IST
ಅಕ್ಷರ ಗಾತ್ರ

ಕೋಟಾ (ರಾಜಸ್ಥಾನ): ಕಾರೊಂದು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಝಲಾವರ್‌ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಭೋಪಾಲ್‌ನ ಡುಂಗ್ರಿ ಗ್ರಾಮದಿಂದ ಮದುವೆ ಮುಗಿಸಿ ಬರುತ್ತಿದ್ದ ವೇಳೆ ಇಕ್‌ಲೇರಾ ಗ್ರಾಮದ ಬಳಿ ನಸುಕಿನ ವೇಳೆ 2.45 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂದು ಝಲಾವರ್ ಪೊಲೀಸ್‌ ವರಿಷ್ಠಾಧಿಕಾರಿ ರಿಚಾ ತೋಮರ್‌ ಹೇಳಿದ್ದಾರೆ.

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಏಳು ಮಂದಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಒಬ್ಬ ವ್ಯಕ್ತಿ ತೀವ್ರ ಗಾಯಗೊಂಡಿದ್ದು, ಅವರನ್ನು ಝಲವಾರ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು 18 ರಿಂದ 30 ವರ್ಷದೊಳಗಿನವರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT