ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ದೇಶದಲ್ಲಿ ಗಂಟೆಗೆ 19 ಸಾವು- ಸಚಿವ ನಿತಿನ್‌ ಗಡ್ಕರಿ

Published 16 ಜನವರಿ 2024, 15:27 IST
Last Updated 16 ಜನವರಿ 2024, 15:27 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದಲ್ಲಿ ರಸ್ತೆ ಅಪಘಾತ ಮತ್ತು ಜನರ ಸಾವಿನ ಪ್ರಕರಣಗಳನ್ನು 2030ರೊಳಗೆ ಶೇ 50ರಷ್ಟಕ್ಕೆ ತಗ್ಗಿಸುವುದು ಕೇಂದ್ರ ಸರ್ಕಾರದ ಪ್ರಧಾನ ಆದ್ಯತೆಯಾಗಿದೆ’ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಪ್ರತಿ ಗಂಟೆಗೆ 53 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 19 ಮಂದಿ ಮೃತಪಡುತ್ತಿದ್ದಾರೆ’ ಎಂದು ತಿಳಿಸಿದರು. 

ರಸ್ತೆ ಸುರಕ್ಷತಾ ಪಾಲನೆಯಲ್ಲಿ ರಸ್ತೆ ಮತ್ತು ವಾಹನಗಳು, ಸಂಚಾರ ನಿಯಮದ ಅನುಷ್ಠಾನ, ಚಾಲಕರಿಗೆ ಶಿಕ್ಷಣ ಹಾಗೂ ತುರ್ತು ವೈದ್ಯಕೀಯ ಸೇವೆಯ ಪಾತ್ರ ಹಿರಿದು. ಇವುಗಳ ಬಲವರ್ಧನೆಗೆ ಕ್ರಮವಹಿಸಲಾಗುವುದು ಎಂದರು.

ಸಾರಿಗೆ ಸಚಿವಾಲಯದ ಅಂಕಿಅಂಶದ ಪ್ರಕಾರ 2022ರಲ್ಲಿ ದೇಶದಲ್ಲಿ 4.6 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿದ್ದು, 1.68 ಲಕ್ಷ ಮಂದಿ ಮೃತಪಟ್ಟಿದ್ದಾರೆ. 4 ಲಕ್ಷ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದರು.

ಅಲ್ಲದೇ, ಆ ವರ್ಷದಲ್ಲಿ ಅಪಘಾತಗಳ ಸಂಖ್ಯೆ ಶೇ 12ರಷ್ಟು ಹಾಗೂ ಸಾವಿನ ಪ್ರಕರಣಗಳು ಶೇ 10ರಷ್ಟು ಏರಿಕೆಯಾಗಿವೆ. ಮೃತಪಟ್ಟವರಲ್ಲಿ ಶೇ 60ರಷ್ಟು 18ರಿಂದ 35 ವಯೋಮಾನದವರು ಇದ್ದಾರೆ. ಇದರಿಂದ ದೇಶದ ಜಿಡಿಪಿಗೆ ಶೇ 3.14ರಷ್ಟು ನಷ್ಟವಾಗಿದೆ ಎಂದು ಹೇಳಿದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT