ಚಂಡೀಗಡ :ಗುರುಗ್ರಾಮ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ, ಹರಿಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ವಿರುದ್ಧ ಹರಿಯಾಣ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ.
ಅಲ್ಲದೆ, ಡಿಎಲ್ಎಫ್ ಮತ್ತು ಓಂಕಾರೇಶ್ವರ ಪ್ರಾಪರ್ಟೀಸ್ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ನೂಹ್ ನಿವಾಸಿ ಸುರಿಂದರ್ ಶರ್ಮಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.