ನವದೆಹಲಿ: ಮಹಾರಾಷ್ಟ್ರದ ಪುಣೆಯ ಯುವ ಉದ್ಯಮಿ ವಿದ್ಯಾ ಪರಶುರಾಮ್ಕರ್ ಅವರಿಗೆ 'ರೋಹಿಣಿ ನಯ್ಯರ್ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ರೋಹಿಣಿ ನಯ್ಯರ್ ಪ್ರತಿಷ್ಠಾನದ ಆಶ್ರಯದಲ್ಲಿ ಇಲ್ಲಿನ ಇಂಡಿಯಾ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ, ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಮಂಡಳಿಯ ಮುಖ್ಯಸ್ಥ ಪ್ರೊ. ಎಸ್. ಮಹೇಂದ್ರ ದೇವ್ ಪ್ರಶಸ್ತಿ ಪ್ರದಾನ ಮಾಡಿದರು. ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಮಾಡಿರುವ ಅನುಪಮ ಸೇವೆಗಾಗಿ ನೀಡುವ ಈ ಪ್ರಶಸ್ತಿಯು ₹10 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

24ರ ಹರೆಯದ ವಿದ್ಯಾ ಅವರು ಖರಗ್ಪುರದ ಐಐಟಿಯ ಎಂ.ಟೆಕ್ (ಆಹಾರ ತಂತ್ರಜ್ಞಾನ) ಪದವೀಧರೆ. ಅವರು ‘ಆಗ್ರೋಝೀ ಆರ್ಗಾನಿಕ್ಸ್–ಮಿಲೆಟ್ಸ್ ನೌ’ ಕಂಪನಿಯ ಸಹ ಸಂಸ್ಥಾಪಕಿ. ವಿಜ್ಞಾನ ಹಾಗೂ ಉದ್ಯಮದ ಮೂಲಕ ಗ್ರಾಮೀಣ ಭಾರತದಲ್ಲಿ ಪರಿವರ್ತನೆ ತರಬೇಕು ಎಂಬ ಸಂಕಲ್ಪದಿಂದ ಈ ಉದ್ಯಮ ಆರಂಭಿಸಿದರು. ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಲು ಈ ಕಂಪನಿ ಉತ್ತಮ ಕೊಡುಗೆ ನೀಡುತ್ತಿದೆ. ಕಂಪನಿಯು ಪೌಷ್ಟಿಕಾಂಶವರ್ಧಿತ, ಜೈವಿಕ ಬಲವರ್ಧಿತ ರಾಗಿಯ ಆಹಾರ ಉತ್ಪನ್ನಗಳನ್ನು ತಯಾರಿಸುತ್ತಿದೆ. ರಾಗಿಯಿಂದ ತಯಾರಿಸಿದ ಲಡ್ಡುಗಳು, ಕುಕೀಸ್ ಮತ್ತಿತರ ಉತ್ಪನ್ನಗಳನ್ನು ಶಾಲೆಗಳಿಗೆ ಒದಗಿಸಲಾಗುತ್ತಿದೆ. 7 ಸಾವಿರ ಸಣ್ಣ ಕೃಷಿಕರಿಗೆ ನೆರವು ನೀಡಿದೆ.

ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ನಯ್ಯರ್ ಮಾತನಾಡಿ, ‘2021ರ ಅಕ್ಟೋಬರ್ಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞೆ ರೋಹಿಣಿ ನಯ್ಯರ್ ಅವರು ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಮಾಡಿರುವ ಮಹತ್ವದ ಕೆಲಸಗಳನ್ನು ಗೌರವಿಸುವ ದಿಸೆಯಲ್ಲಿ ಅವರ ಹೆಸರಿನಲ್ಲಿ ಪ್ರತೀವರ್ಷ ಪ್ರಶಸ್ತಿ ನೀಡಲಾಗುತ್ತಿದೆ. ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಮಹಿಳೆಯ ಹೆಸರಿನಲ್ಲಿ ನೀಡುತ್ತಿರುವ ಮೊದಲ ಪ್ರಶಸ್ತಿ ಇದಾಗಿದೆ. ಯುವ ಸಾಧಕರಿಗೆ ಗ್ರಾಮೀಣ ಕ್ಷೇತ್ರದಲ್ಲಿ ಕೆಲಸ ಮಾಡಲು ಈ ಪ್ರಶಸ್ತಿ ಇನ್ನಷ್ಟು ಉತ್ತೇಜನ ನೀಡಲಿದೆ. 40 ವರ್ಷದೊಳಗಿನ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.