ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ಮೇಲ್ಛಾವಣಿ ಕುಸಿತ: ಇಬ್ಬರು ಕಾರ್ಮಿಕರು ಸಾವು​​, 17 ಮಂದಿಗೆ ಗಾಯ

Published 15 ಏಪ್ರಿಲ್ 2024, 7:33 IST
Last Updated 15 ಏಪ್ರಿಲ್ 2024, 7:33 IST
ಅಕ್ಷರ ಗಾತ್ರ

ಮುಜಾಫರ್‌ನಗರ ( ಉತ್ತರ ಪ್ರದೇಶ): ನಿರ್ಮಾಣ ಹಂತದಲ್ಲಿರುವ ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೋಹಿತ್ (30) ಹಾಗೂ ಪಿಯೂಷ್ (28) ಮೃತರು.

ಭಾನುವಾರ ತಾಲ್ಡಾ ಗ್ರಾಮದಲ್ಲಿ ಕೂಲಿ ಕಾರ್ಮಿಕರು ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಿ.ಕೆ.ಠಾಕೂರ್ ತಿಳಿಸಿದ್ದಾರೆ.

ಗಾಯಗೊಂಡ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದೆನ್ನಲಾಗಿದೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT