ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೋಶನಿ ದೇಶದ ಶ್ರೀಮಂತ ಮಹಿಳೆ

Published : 27 ಜುಲೈ 2022, 20:52 IST
ಫಾಲೋ ಮಾಡಿ
Comments

ಬೆಂಗಳೂರು: ಹುರೂನ್ ಇಂಡಿಯಾ ಸಂಸ್ಥೆಯು ದೇಶದ ಅತ್ಯಂತ ಶ್ರೀಮಂತ ಮಹಿಳೆಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎಚ್‌ಸಿಎಲ್‌ ಟೆಕ್ನಾಲಜೀಸ್ ಕಂಪನಿಯ ಅಧ್ಯಕ್ಷೆ ರೋಶನಿ ನಾಡಾರ್ ಮಲ್ಹೋತ್ರಾ ಮೊದಲ ಸ್ಥಾನದಲ್ಲಿದ್ದಾರೆ.

ಎರಡು ಮತ್ತು ಮೂರನೆಯ ಸ್ಥಾನಗಳಲ್ಲಿ ಕ್ರಮವಾಗಿ ಫಲ್ಗುಣಿ ನಾಯರ್ ಮತ್ತು ಕುಟುಂಬ (ಫಲ್ಗುಣಿ ಅವರು ನೈಕಾ ಕಂಪನಿಯ ಸಿಇಒ) ಹಾಗೂ ಕಿರಣ್ ಮಜುಂದಾರ್ ಶಾ (ಬಯೋಕಾನ್ ಅಧ್ಯಕ್ಷೆ) ಇದ್ದಾರೆ.

‘ಕೋಟಕ್ ಪ್ರೈವೇಟ್ ಬ್ಯಾಂಕಿಂಗ್ ಹುರೂನ್ ಲೀಡಿಂಗ್ ವೆಲ್ತಿ ವಿಮೆನ್ 2021’ ಹೆಸರಿನ ವರದಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. 2021ರ ಡಿಸೆಂಬರ್ 31ರವರೆಗಿನ ಮಾಹಿತಿ ಆಧರಿಸಿ ಈ ವರದಿ ಸಿದ್ಧಪಡಿಸಲಾಗಿದೆ.

ಔಷಧ ಉದ್ಯಮ, ಆರೋಗ್ಯಸೇವೆ, ಗ್ರಾಹಕ ಬಳಕೆ ಸರಕುಗಳ ಉದ್ಯಮ ವಲಯದ ಮಹಿಳೆಯರು ಶ್ರೀಮಂತರ ಪಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸ್ಥಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT