ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಜ್‌ಗಾರ್‌ ಮೇಳ: ಪ್ರಧಾನಿ ವಿರುದ್ಧ ಕಾಂಗ್ರೆಸ್‌ ವಕ್ತಾರ ಜೈರಾಮ್‌ ರಮೇಶ್‌ ಕಿಡಿ

Published 28 ಆಗಸ್ಟ್ 2023, 12:02 IST
Last Updated 28 ಆಗಸ್ಟ್ 2023, 12:02 IST
ಅಕ್ಷರ ಗಾತ್ರ

ಬೆಂಗಳೂರು: ರೋಜ್‌ಗಾರ್‌ ಮೇಳದ ಮೂಲಕ 51 ಸಾವಿರ ನೇಮಕಾತಿ ಪತ್ರಗಳನ್ನು ವಿತರಿಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ವಕ್ತಾರ ಜೈರಾಮ್‌ ರಮೇಶ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಭರವಸೆಯಂತೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲು ವಿಫಲವಾದ ಬಳಿಕ, ಕೋವಿಡ್‌ ಸಂದರ್ಭದಲ್ಲಿ ಏಕಾಏಕಿ ಹೇರಿದ ಲಾಕ್‌ಡೌನ್‌ ಹಾಗೂ ಜಿಎಸ್‌ಟಿಯಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ನಾಶ ಮಾಡಿದ ಬಳಿಕ, ಉದ್ಯೋಗಾಕಾಂಕ್ಷಿಗಳ ನಿರೀಕ್ಷೆಗೆ 9 ವರ್ಷಗಳಿಂದ ದ್ರೋಹ ಬಗೆದ ಬಳಿಕ, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರೋಜ್‌ಗಾರ್‌ ಮೇಳ ಎಂಬ ದೊಡ್ಡ ಸುಳ್ಳಿನೊಂದಿಗೆ ಬಂದಿದ್ದಾರೆ. ಆ ಮೂಲಕ ಕುಸಿದಿರುವ ತಮ್ಮ ಖ್ಯಾತಿಯನ್ನು ರಕ್ಷಿಸಿಕೊಳ್ಳಲು ನೋಡುತ್ತಿದ್ದಾರೆ.

ಪ್ರಧಾನ ಮಂತ್ರಿ ಅವರ ರೋಜ್‌ಗಾರ್ ಮೇಳವು ಒಂದು ಗಿಮಿಕ್ ಆಗಿದ್ದು, ಇದು ನಿರುದ್ಯೋಗ ಪರಿಸ್ಥಿತಿಯ ಪುರಾವೆಯಾಗಿದೆ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT