ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಜರಾತ್ | ₹130 ಕೋಟಿ ಮೌಲ್ಯದ ಕೊಕೇನ್ ವಶ

Published 5 ಜೂನ್ 2024, 6:43 IST
Last Updated 5 ಜೂನ್ 2024, 6:43 IST
ಅಕ್ಷರ ಗಾತ್ರ

ಗಾಂಧಿಧಾಮ: ಗುಜರಾತ್‌ನ ಕಛ್ ಜಿಲ್ಲೆಯ ಗಾಂಧಿಧಾಮ ಪಟ್ಟಣದ ಬಳಿಯ ಕರಾವಳಿ ಪ್ರದೇಶದಲ್ಲಿ ₹130 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಿಕ್ಕಿಬೀಳುವುದನ್ನು ತಪ್ಪಿಸಲು ಕಳ್ಳಸಾಗಣೆದಾರರು ಕೊಕೇನ್ ಅನ್ನು ಕಡಲ ತೀರದಲ್ಲಿ ಬಚ್ಚಿಟ್ಟಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಕಛ್ ಪೂರ್ವ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ತಿಳಿಸಿದ್ದಾರೆ.

ಕಳೆದ ಎಂಟು ತಿಂಗಳ ಅವಧಿಯಲ್ಲಿ ಈ ಪ್ರದೇಶದಲ್ಲಿ ನಡೆಸಲಾದ ಎರಡನೇ ಅತಿ ದೊಡ್ಡ ಕಾರ್ಯಾಚರಣೆ ಇದಾಗಿದೆ.

ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಹಾಗೂ ವಿಶೇಷ ಕಾರ್ಯಾಚರಣೆಯ ತಂಡವು ಕೊಕೇನ್‌ನ 13 ಪ್ಯಾಕೆಟ್‌ಗಳನ್ನು ಜಪ್ತಿ ಮಾಡಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಇದೇ ಪ್ರದೇಶದಲ್ಲಿ ₹800 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT