ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ₹ 4 ಕೋಟಿ ನಗದು ವಶ

Published 7 ಏಪ್ರಿಲ್ 2024, 15:43 IST
Last Updated 7 ಏಪ್ರಿಲ್ 2024, 15:43 IST
ಅಕ್ಷರ ಗಾತ್ರ

ಚೆನ್ನೈ: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್‌ ಸ್ಕ್ವಾಡ್‌ನ ಅಧಿಕಾರಿಗಳು ₹ 4 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.

ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್‌ ನಾಗೇಂದ್ರನ್‌ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಮೂವರು ಎಗ್ಮೋರ್‌ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು ಭಾನುವಾರ ತಿಳಿಸಿದರು.

ಮತದಾರರಿಗೆ ಹಣ ಹಂಚುತ್ತಿರುವ ಆರೋಪದಲ್ಲಿ ನೈನಾರ್‌ ನಾಗೇಂದ್ರನ್‌ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಡಿಎಂಕೆ, ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದೆ.

‘ನಾಗೇಂದ್ರನ್‌ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ’ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್‌. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್‌ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT