ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ | 5 ತಿಂಗಳಲ್ಲೇ ₹4,131 ಕೋಟಿ ಮೌಲ್ಯದ ಡ್ರಗ್ಸ್ ವಶ

Published 11 ಜುಲೈ 2024, 9:26 IST
Last Updated 11 ಜುಲೈ 2024, 9:26 IST
ಅಕ್ಷರ ಗಾತ್ರ

ಮುಂಬೈ: ಪ್ರಸಕ್ತ ಸಾಲಿನ ಮೊದಲ ಐದು ತಿಂಗಳಲ್ಲೇ ರಾಜ್ಯದಲ್ಲಿ ₹4,131 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ರಾಜ್ಯ ವಿಧಾನ ಪರಿಷತ್ ಅಧಿವೇಶನದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, 'ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಕೆಲವು ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.

ಆ ಮೂಲಕ ಕಳೆದ ವರ್ಷ ಜಪ್ತಿ ಮಾಡಿದ್ದ ಪ್ರಮಾಣಕ್ಕಿಂತ ಪ್ರಸಕ್ತ ಸಾಲಿನಲ್ಲಿ ಶೇ 360ರಷ್ಟು ಹೆಚ್ಚಳ ಕಂಡಿದೆ ಎಂದು ಹೇಳಿದೆ.

ಮಾದಕ ದ್ರವ್ಯ ನಿಗ್ರಹ ದಳ ನಡೆಸಿದ ಕಾರ್ಯಾಚರಣೆಯ ಅಂಕಿಅಂಶಗಳನ್ನು ಮಹಾರಾಷ್ಟ್ರ ಸರ್ಕಾರ ಬಿಡುಗಡೆಗೊಳಿಸಿದೆ.

2023ನೇ ವರ್ಷದಲ್ಲಿ ನಡೆಸಿದ್ದ 12,648 ಕಾರ್ಯಾಚರಣೆಗಳಲ್ಲಿ ₹897 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿತ್ತು. ಆದರೆ ಪ್ರಸಕ್ತ ಸಾಲಿನ ಮೇ ತಿಂಗಳವರೆಗೆ 6,529 ಕಾರ್ಯಾಚರಣೆಗಳಲ್ಲಿ ₹4,131 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT